'ಇಲ್ಲ' ಎನ್ನುವ ಒಂದು ಮಾತಲಿ
ಎನಿತು ಕನಸಿನ ಕಗ್ಗೊಲೆ;
ಗೆಲ್ಲಲಾರದೆ ಹೋದ ಒಲವದು
ಎಂದೂ ಮಾಯದ ಕಾಯಿಲೆ.
ಮಾತು-ಮಾತನು ಪೋಣಿಸಿ ತಂದೆನಾ
ಒಲವ ಬಿನ್ನಹ ಹಾರವ;
ಭ್ರಮಿತ ಮತಿಯಲಿ ಅರಿಯದಾದೆನೆ
ಮನಸು-ಮನಸಿನ ದೂರವ?
ಸಮಯದಾಟದಿ ಕಂಡ ಸೋಜಿಗ
ಸತ್ಯವೆಂದೇ ನಂಬಿದೆ;
ನಿಜದ ಬಣ್ಣವು ಕಾಣದಾಯಿತೇ
ಸ್ವಪ್ನ ಮುಸುಕಿದ ಕಣ್ಣಿಗೆ?
ಮರೆಯಬೇಕೇ, ಕಾಯಬೇಕೇ
ಬೆಳಗದೇ ಹೋದ ಜ್ಯೋತಿಯ?
ಬರುವ ನಾಳೆಯ ತಿರುವಲೆಲ್ಲೋ
ಮತ್ತೆ ಸಿಗುವುದೇ ಈ ಪ್ರೀತಿಯು?
(ಮಂಗಳ 6-7-2016ರ ಸಂಚಿಕೆಯಲ್ಲಿ ಪ್ರಕಟವಾದ ಕವನ)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ